ಕೃಷಿಕ, ಬಿಜೆಪಿ ಕಾರ್ಯಕರ್ತ ಭಾಸ್ಕರ್ ಹೆಗ್ಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು
![bhaskara hegde](https://www.mahanayaka.in/wp-content/uploads/2022/09/bhaskara-hegde.jpg)
ಕೃಷಿಕರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನಿಲೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ
ಮೃತರನ್ನು ನೀಲೆ ಬೆಟ್ಟು ಗುತ್ತು ಮನೆಯ ಸಾವಯವ ಕೃಷಿಕ ಭಾಸ್ಕರ್ ಹೆಗ್ಡೆ ಎಂದು ಗುರುತಿಸಲಾಗಿದೆ. ಕಾರ್ಕಳದ ಪರಿಸರದಲ್ಲಿ ಸಾವಯವ ಕೃಷಿಯಲ್ಲಿ ಮನೆಮಾತಾಗಿದ್ದ ಇವರು, ದುರ್ಗಾ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು.
ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಭಾಸ್ಕರ್ ಹೆಗ್ಡೆ ತನ್ನ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಕಾರ ಕಾರಣ ತಿಳಿದು ಬಂದಿಲ್ಲ.
ಆರ್ಥಿಕ ಸಂಕಷ್ಟದಿಂದ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ
ಆರ್ಥಿಕ ಸಂಕಷ್ಟದಿಂದ ಬೇಸತ್ತ ಉಪನ್ಯಾಸಕಿಯೋರ್ವಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿ ಎಂಬಲ್ಲಿ ಇಂದು ನಡೆದಿದೆ.
ಕೊಡವೂರು ಕಾನಂಗಿಯ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಶಿರ್ವಾದ ಹಿಂದೂ ಪಿಯು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೀನಾ ಅವರ ಪತಿ ಗುಂಡಿಬೈಲು ನಿವಾಸಿ ನಿತ್ಯಾನಂದ ಎಂಬವರು 9 ತಿಂಗಳ ಹಿಂದೆ ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸಾಲದ ಹೊರೆ ಬೀನಾ ಅವರ ಮೇಲೆ ಇತ್ತು. ಆದರೆ ತನಗೆ ಬರುತ್ತಿದ್ದ ಕಡಿಮೆ ವೇತನದಿಂದ ಸಾಲ ತೀರಿಸಲಾಗದೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಹೀಗಾಗಿ ಬೀನಾ ಅವರ ತಂದೆ ತಾಯಿ ಇಂದು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಯಾರಿ ನಡೆಸಿದ್ದರು. ಆದರೆ ಇಂದು ಬೆಳಿಗ್ಗೆ ಬಂದು ನೋಡಿದಾಗ ಬೀನಾ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka