ಪುಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆ ಸಾವು
14/09/2022
ಪುಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರು ನಗರದ ವೆಲೆನ್ಸಿಯ ನಿವಾಸಿ ಜಿಶಾ ಜೋನ್ ಎಂದು ಗುರುತಿಸಲಾಗಿದೆ. ಜಿಶಾ ಜೋನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಮೃತರು ಪತಿ, ತಂದೆ-ತಾಯಿ, ಸಹೋದರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೃತದೇಹವನ್ನು ಮಂಗಳೂರಿಗೆ ತರಲಾಗಿದೆ. ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 2:30ಕ್ಕೆ ಜೆಪ್ಪು ಸೈಂಟ್ ಆ್ಯಂಟೋನಿ ಚರ್ಚ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka