ಸಾಮಾನು ಖರೀದಿಸುತ್ತಿದ್ದ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ: ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ. ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿರುವ ಅಂಗಡಿಯೊಂದಕ್ಕೆ ಮಹಿಳೆಯೊಬ್ಬರು ಸಾಮಾನು ಖರೀದಿಸಲೆಂದು ಬಂದಿದ್ದರು. ಅಂಗಡಿ ಮಾಲಕ ಹೊರಗಡೆ ಹೋಗಿದ್ದ ಸಂದರ್ಭ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಎಂಬಾತ ಮಹಿಳೆಯ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳಿಂದ ಪುತ್ತೂರಿನ ತಿಂಗಳಾಡಿಯಲ್ಲಿ ಪ್ರತಿಭಟನೆ ನಡೆಯಿತು. ಆರೋಪಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆತನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಹಿಂದೂಪರ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಹಿಂದೂಪರ ಸಂಘಟನೆಗಳ ಪ್ರತಿಭಟನೆ ವಿಡಿಯೋ:
ಹಿಂದೂಪರ ಸಂಘಟನೆಗಳ ಪ್ರತಿಭಟನೆ ವಿಡಿಯೋ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka