ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ: 2 ಲಾರಿ ಸಹಿತ 3 ಮೆಟ್ರಿಕ್ ಟನ್ ಮರಳು ವಶಕ್ಕೆ - Mahanayaka
11:06 AM Saturday 14 - December 2024

ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ: 2 ಲಾರಿ ಸಹಿತ 3 ಮೆಟ್ರಿಕ್ ಟನ್ ಮರಳು ವಶಕ್ಕೆ

maralugarike
15/09/2022

ಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ 2 ಲಾರಿ ಸಮೇತ 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿರುತ್ತಾರೆ.

ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ, ಉಡುಪಿ ತಾಲೂಕು ಪೆರಂಪಳ್ಳಿ ಪರಿಸರದಲ್ಲಿ ದಲ್ಲಿ (ಸ್ವರ್ಣ ನದಿ) ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರ ಮಾಹಿತಿ ಮೇರೆಗೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಅವರು ರಾತ್ರಿ ಸಮಯ 10ಕ್ಕೆ ದಾಳಿ ನಡೆಸಿ ಎರಡು ಲಾರಿ ಮತ್ತು 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಚಾಲಕ ಯೋಗೇಶ್ವರ್ ಶೆಟ್ಟಿಗಾರ್ ಸಹಕರಿಸುತ್ತಾರೆ. ಭೂವಿಜ್ಞಾನಿ ಯವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವ ವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ವಾಹನಗಳನ್ನು ಮಣಿಪಾಲ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ