ಹಾಸ್ಟೆಲ್ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಿ ವೈರಲ್ ಮಾಡಿದ ವಿದ್ಯಾರ್ಥಿನಿ!
ಚಂಡೀಗಢ: ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ಆನ್ ಲೈನ್ ನಲ್ಲಿ ಶೇರ್ ಮಾಡಿರುವ ಘಟನೆ(Video Leak) ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸ್ಟೆಲ್ ನಲ್ಲಿ ಯುವತಿಯರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಲಾಗಿದೆ. ಈ ಘಟನೆಯ ಬಳಿಕ ಪಂಜಾಬ್ ನ ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಘಟನೆಯ ಬಳಿಕ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ಹರಡಿತ್ತು. ಆದರೆ ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಓರ್ವ ವಿದ್ಯಾರ್ಥಿನಿ ಆಘಾತಗೊಂಡು ಮೂರ್ಛೆ ಹೋಗಿದ್ದಳು. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪಂಜಾಬ್ ಮಹಿಳಾ ಆಯೋಗದ ಅಧ್ಯಕ್ಷೆ ಮನಿಷಾ ಗಲಾಟಿ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಪಡೆದ ಬಳಿಕ ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka