ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಯಡಿಯೂರಪ್ಪ - Mahanayaka

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಯಡಿಯೂರಪ್ಪ

yediyurappa
19/09/2022

ನವದೆಹಲಿ: ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ