ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣ ಕಳವು - Mahanayaka
7:24 PM Wednesday 5 - February 2025

ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣ ಕಳವು

crime
20/09/2022

ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಮನೆಯ ಕೋಣೆಯ ಕಪಾಟಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಸೆ.18ರಂದು ರಾತ್ರಿ ನಡೆದಿದೆ.

ಕೋಟೇಶ್ವರ ಗ್ರಾಮದ ನಾರಾಯಣ ಆಚಾರ್ಯ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಕಪಾಟಿನಲ್ಲಿದ್ದ 64 ಗ್ರಾಂ ತೂಕದ ಚಿನ್ನದ ಲಕ್ಷ್ಮೀ ಹಾರ, 12 ಗ್ರಾಂ ತೂಕದ ಬ್ರೇಸ್ಲೇಟ್, 4 ಬೆಳ್ಳಿಯ ಲೋಟ, 4 ಬೆಳ್ಳಿಯ ಚಮಚ ಹಾಗೂ 12 ಸಾವಿರ ನಗದು ಸೇರಿ ಒಟ್ಟು ರೂಪಾಯಿ 3.66 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

youth death

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೋರ್ವರು ದನದ ಕೊಟ್ಟಿಗೆಯ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮ ಯಡಮಕ್ಕಿ ಎಂಬಲ್ಲಿ ಸೆ.18ರಂದು ನಡೆದಿದೆ.

ಯಡಮಕ್ಕಿ ನಿವಾಸಿ 85 ವರ್ಷದ ತಿಮ್ಮ ದೇವಾಡಿಗ ಮೃತದುರ್ದೈವಿ. ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮನೆಯ ದನದ ಕೊಟ್ಟಿಗೆಯ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ