ಮಾತು ತಪ್ಪಿದ ಸರ್ಕಾರ: ಹೊರಗುತ್ತಿಗೆಗೆ ಟೆಂಡರ್ ಕರೆದ ಮಂಗಳೂರು ಮಹಾನಗರ ಪಾಲಿಕೆ!
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್ ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘವು ಆಗ್ರಹಿಸಿದೆ.
ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖಂಡರು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಸ್ಪಚ್ಛತಾ ವಾಹನ ಚಾಲಕರನ್ನು ಗುತ್ತಿಗೆ ಪದ್ದತಿಯಿಂದ ಕೈಬಿಟ್ಟು ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಮಾಡುವಂತೆ ಸಂಘವು ರಾಜ್ಯಾದ್ಯಾಂತ ಹೋರಾಟ ರೂಪಿಸಿತ್ತು. ಈ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ ಸ್ವಚ್ಛತೆಯಲ್ಲಿ ತೊಡಗಿಕೊಂಡಿರುವ ವಾಹನ ಚಾಲಕರು, ಯುಜಿಡಿ ಕಾರ್ಮಿಕರನ್ನು ನೇರ ಪಾವತಿಗೆ ತರುವುದಾಗಿ ನಿರ್ಣಯ ಕೈಗೊಂಡಿತ್ತು. ಈ ಬಗ್ಗೆ ಸ್ವತ: ಮುಖ್ಯಮಂತ್ರಿಗಳೇ ಈ ತೀರ್ಮಾನವನ್ನು ಘೋಷಿಸಿದ್ದಾರೆ. ಹೀಗಿರುವಾಗ ಮಂಗಳೂರು ನಗರಪಾಲಿಕೆ ಸ್ವಚ್ಛತಾ ವಾಹನ ಚಾಲಕರನ್ನು ಮರಳ ಟೆಂಡರ್ ಪದ್ಧತಿಗೆ ಒಳಪಡಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಸ್ವಚ್ಛತಾ ವಾಹನ ಚಾಲಕರ ಕರ್ತವ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನಿಯಮಿತ ಸಮಯಪಾಲನ ಇಲ್ಲದೆ ಪ್ರಾಣಿಗಳಂತೆ ದುಡಿಸಿಕೊಳ್ಳಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೇ ಕಿರುಕುಳ ನೀಡಲಾಗುತ್ತಿದೆ. ಹೊರಗುತ್ತಿಗೆ ಎಂಬುದು ಸರಕಾರದ ಅಧಿಕೃತ ಜೀತಗಾರಿಕೆ ಎಂಬಂತಾಗಿದೆ ಎಂದು ಕಿಡಿಕಾರಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka