ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ: ಪೇ ಸಿಎಂ ಪೋಸ್ಟರ್ ಹಿನ್ನೆಲೆ ಸಿದ್ದರಾಮಯ್ಯ ಹೇಳಿಕೆ - Mahanayaka
4:02 PM Thursday 12 - December 2024

ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ: ಪೇ ಸಿಎಂ ಪೋಸ್ಟರ್ ಹಿನ್ನೆಲೆ ಸಿದ್ದರಾಮಯ್ಯ ಹೇಳಿಕೆ

siddaramaiha
22/09/2022

ಬೆಂಗಳೂರು: ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ ಎಂದು  ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಸಿಎಂ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ?  ಎಂದು ಅವರು ಪ್ರಶ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ