ಯುವತಿಯ ಬರ್ಬರ ಹತ್ಯೆ: ಬಿಜೆಪಿ ನಾಯಕನ ಪುತ್ರನ ಸಹಿತ ಮೂವರ ಬಂಧನ - Mahanayaka

ಯುವತಿಯ ಬರ್ಬರ ಹತ್ಯೆ: ಬಿಜೆಪಿ ನಾಯಕನ ಪುತ್ರನ ಸಹಿತ ಮೂವರ ಬಂಧನ

pulkit arya case
23/09/2022

19 ವರ್ಷದ ಯುವತಿಯನ್ನು  ಹತ್ಯೆಗೈದ ಆರೋಪದ ಮೇಲೆ ಉತ್ತರಾಖಂಡದ ಪೌರಿ ಜಿಲ್ಲೆ ಬಿಜೆಪಿ  ನಾಯಕನ ಪುತ್ರನನ್ನು ಶುಕ್ರವಾರ ಬಂಧಿಸಲಾಗಿದೆ.

ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ. ಪುಲ್ಕಿತ್ ಆರ್ಯನ ರೆಸಾರ್ಟ್ ನಲ್ಲಿ ಅಂಕಿತಾ ಭಂಡಾರಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರದಿಂದ ಆಕೆ ನಾಪತ್ತೆಯಾಗಿದ್ದಳು.

ನಾಪತ್ತೆಯಾಗಿದ್ದ ಯುವತಿಯನ್ನು ಕೊಂದು ಶವವನ್ನು ಕಾಲುವೆಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ ಎಂದು ಪೌರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಚಂದ್ರ ಸುಯಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ