ಅಂಗಡಿಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಕಳವು
25/09/2022
ಮಲ್ಪೆ: ಮೊಬೈಲ್ ಅಂಗಡಿಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಕಳ್ಳನು ಕಳ್ಳತನ ಮಾಡುವ ದೃಶ್ಯ ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಲೆಬಾಳುವ 7 ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಕಳ್ಳನು ಮುಖ ಚಹರೆ ಮರೆಮಾಚಲು ರೈನ್ ಕೋಟ್ ಧರಿಸಿದ್ದನು ಎನ್ನಲಾಗಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka