12 ವರ್ಷದ ಬಾಲಕನ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಚಿತ್ರಹಿಂಸೆ
ನವದೆಹಲಿ: 12 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ನಡೆದಿದ್ದು, ಬಾಲಕನ ಖಾಸಗಿ ಅಂಗಗಳಿಗೆ ರಾಡ್ ಹಾಕಿ ಚಿತ್ರ ಹಿಂಸೆ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಬಾಲಕನ ಮೇಲೆ ಆತನ ಸ್ನೇಹಿತರೇ ಎನ್ನಲಾಗಿರುವ ನಾಲ್ವರು ಸೇರಿ ದೌರ್ಜನ್ಯ ನಡೆಸಿದ್ದಾರೆನ್ನಲಾಗುತ್ತಿದೆ. ಬಾಲಕನಿಗೆ ಕೋಲುಗಳಿಂದ ಹೊಡೆದಿರುವುದೇ ಅಲ್ಲದೇ ಗುಪ್ತಾಂಗಕ್ಕೆ ರಾಡ್ ಹಾಕಿ ಅಮಾನುಷವಾಗಿ ವರ್ತಿಸಲಾಗಿದೆ. ಪರಿಣಾಮವಾಗಿ ಬಾಲಕ ಪ್ರಜ್ಞಾಹೀನನಾಗಿದ್ದಾನೆ ಎನ್ನಲಾಗಿದೆ.
ಕೃತ್ಯಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಘಟನೆಯನ್ನು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಖಂಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka