ಪ್ರಧಾನಿ ಮೋದಿ ಹೋದ ಕಡೆಯೆಲ್ಲ ಬಿಜೆಪಿ ಸೋತಿದೆ: ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಮೈಸೂರು: ಪ್ರಧಾನಿ ಮೋದಿ ಹೋದ ಕಡೆಯೆಲ್ಲ ಬಿಜೆಪಿ ಸೋತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ.
ರಾಜ್ಯಕ್ಕೆ ರಾಹುಲ್ ಬಂದ್ರೆ, ಬಿಜೆಪಿಗೆ ಲಾಭ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಪಂಜಾಬ್, ತೆಲಂಗಾಣ, ಕೇರಳಕ್ಕೆ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿಲ್ವಾ? ಎಂದು ಮರು ಪ್ರಶ್ನೆ ಹಾಕಿದರು.
ಪೋಸ್ಟರ್ ವಿಚಾರಕ್ಕೆ ‘ಡರ್ಟಿ ಪಾಲಿಟಿಕ್ಸ್’ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ನಾವು ಕೀಳು ಮಟ್ಟದ ರಾಜಕೀಯ ಮಾಡಿಲ್ಲ ಬಿಜೆಪಿ ಸರ್ಕಾರದವರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ. ಡರ್ಟಿ ಪಾಲಿಟಿಕ್ಸ್ ಮಾಡ್ತಿರೋದು ಸಂಘಪರಿವಾರದವರು ಎಂದು ಕಿಡಿಕಾರಿದರು.
ಸಂಘಪರಿವಾರದವರು ಗಣೇಶನ ಮೆರವಣಿಗೆಯಲ್ಲಿ ಗೋಡ್ಸೆ ಫೋಟೋ ಇಟ್ಟುಕೊಂಡು ಓಡಾಡ್ತಾರೆ ಇವರಿಗೆ ಯಾವ ನೈತಿಕತೆ ಇದೆ? ಇವರಿಗೆ ಡರ್ಟಿ ಪಾಲಿಟಿಕ್ಸ್ ಅಂದ್ರೆ ಗೊತ್ತಿಲ್ಲ ಪಾಪ!. ಭ್ರಷ್ಟಾಚಾರ ಮಾಡ್ತೀರಾ? ಅಂತ ಕೇಳೋದು ಡರ್ಟಿ ಪಾಲಿಟಿಕ್ಸಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka