ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ
ಬೆಳ್ತಂಗಡಿ; ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ.
ಅತಿಯಾದ ವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದೆ ಈ ಸಂದರ್ಭದಲ್ಲಿ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ ಮರದ ದಿಮ್ಮಿಗಳು ತುಂಬಿದ್ದ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು ,ಮನೆಯ ಮೇಲ್ಛಾವಣಿ ಕುಸಿದಿದೆ.
ಮನೆಯಲ್ಲಿ ಯಾರೂ ವಾಸವಿಲ್ಲದ ಕಾರಣ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿ ಜಖಂಗೊಂಡಿದೆ. ಬಸ್ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.
ವಿದ್ಯಾರ್ಥಿಗಳು ಬಸ್ ಕಾಯುವ ಜಾಗ ಇದಾಗಿದ್ದು ಘಟನೆಗಿಂತ ಕೆಲ ಹೊತ್ತು ಮೊದಲು ಇಲ್ಲಿ ವಿಧ್ಯಾರ್ಥಿಗಳು ಬಸ್ ಕಾಯುತ್ತಿದ್ದರು. ವಿದ್ಯಾರ್ಥಿಗಳು ಅಲ್ಲಿಂದ ತೆರಳಿದ ಬಳಿಕ ಘಟನೆ ಸಂಭವಿಸಿದ್ದು ದೊಡ್ಡ ಅಪಾಯ ತಪ್ಪಿದಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka