ಮಳಲಿ ಮಸೀದಿ ಪ್ರಕರಣ: ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್
ಮಂಗಳೂರಿನ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಕೋರ್ಟ್ ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿದೆ.
ಮಂಗಳೂರು ತಾಲೂಕಿನ ಮಳಲಿಪೇಟೆ ಮಸೀದಿ ನವೀಕರಣದ ಸಂದರ್ಭ ಸ್ಥಳೀಯರಾದ ಧನಂಜಯ ಮತ್ತಿತರ ಐವರು ಮಸೀದಿಯು ಹಿಂದೂ ದೇವಾಲಯವಿದ್ದಂತಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ಈ ಕುರಿತು ಮಸೀದಿ ಪರ ವಾದ ಮಂಡಿಸಿದ ವಕೀಲರು, ಮಸೀದಿ ವಕ್ಫ್ ಆಸ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ವಕ್ಫ್ ಸಂಬಂಧಿತ ನ್ಯಾಯಾಲಯದ ಪರಿಧಿಗೆ ಬರುತ್ತದೆ. ಹಾಗಾಗಿ ಮಸೀದಿ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ವಾದಿಸಿದ್ದರು.
ಈ ಕುರಿತು ವಾದ ಆಲಿಸಿದ್ದ ನ್ಯಾಯಾಲಯ ಸೆಪ್ಟೆಂಬರ್ 27ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಆದರೆ, ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka