ಉಡುಪಿಯ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಉಡುಪಿ: ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕಲ್ಮಾಡಿ ಜಂಕ್ಷನ್ ನಿಂದ ಕರಾವಳಿ ಬೈಪಾಸ್ ವರೆಗೆ ವಿನೂತನ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಲ್ಮಾಡಿಯಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಕಂಬಳದ ಕೋಣ, ಡೋಲು, ಪಟಾಕಿ ವಿಶೇಷವಾಗಿತ್ತು. ಬಳಿಕ ಕರಾವಳಿ ಬೈಪಾಸ್ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಮಾತನಾಡಿ, ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಅ.7ರಿಂದ 14ರೊಳಗೆ ಹುಡುಕಿ ಸೆಲ್ಫಿ ತೆಗೆದು ಕಳುಹಿಸಿಕೊಟ್ಟ ಮೊದಲ ವಿಜೇತ 5 ಮಂದಿಗೆ ತಲಾ 5 ಸಾವಿರ ಬಹುಮಾನವಾಗಿ ನೀಡಲಾಗುವುದು. ಆ ಬಳಿಕವೂ ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು ಎಂದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಅಮೃತ್ ಶೆಣೈ, ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಆನಂದಿ, ಅಣ್ಣಯ್ಯ ಶೇರಿಗಾರ್, ಪ್ರಶಾಂತ್ ಜತ್ತನ್ನ, ಮೀನಾಕ್ಷಿ ಮಾಧವ ಬನ್ನಂಜೆ, ಫಾ.ವಿಲಿಯಂ ಮಾರ್ಟಿಸ್, ಗಣೇಶ್ ನೆರ್ಗಿ, ವೆರೆನಿಕಾ ಕರ್ನೇಲಿಯೋ, ಡಾ.ಸುನೀತಾ ಶೆಟ್ಟಿ, ರೋಶನಿ ಒಲಿವೆರಾ, ದಿನೇಶ್ ಪುತ್ರನ್, ಬಿ.ಕುಶಲ ಶೆಟ್ಟಿ, ಸುರಯ್ಯ ಅಂಜಮ್, ಲೂವಿಸ್ ಲೋಬೊ, ನಾರಾಯಣ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka