ಪಿಎಫ್ ಐ ಬ್ಯಾನ್: ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ಸಮಾಜದಲ್ಲಿ ಯಾರು ಅಶಾಂತಿ ಸೃಷ್ಟಿಸುತ್ತಾರೆ, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ, ಅಂತಹದ್ದಕ್ಕೆ ಕ್ರಮಕೈಗೊಂಡ್ರೆ ನಮ್ಮದೇನೂ ವಿರೋಧ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಪಿಎಫ್ ಐಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಿಎಫ್ ಐ ರೀತಿಯಲ್ಲಿ ಆರೆಸ್ಸೆಸ್ ನವರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಾವು ಹೇಳಿದಂತೆ ನಡೆದುಕೊಂಡಿದ್ದೇವೆ ಅಂತ ಬಿಜೆಪಿಯವರು ಹೇಳುತ್ತಿದ್ದಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿಯವರೆಗೆ ಯಾಕೆ ಅವರು ಬ್ಯಾನ್ ಮಾಡಿರಲಿಲ್ಲ? ನಾವು ಹೇಳಿದ ಮೇಲೆ ಬ್ಯಾನ್ ಮಾಡಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka