ಚೆಕ್ ಅಮಾನ್ಯ ಪ್ರಕರಣ: ಉತ್ತರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ತಾಲೂಕಿನ ವ್ಯಕ್ತಿಯೊಬ್ಬರಿಗೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಒಂದು ಕೋಟಿ ಹತ್ತು ಲಕ್ಷದ ಚೆಕ್ ನೀಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಗರದ ನಿವಾಸಿ ದೀಪಕ್ ಮೌರ್ಯ (33)ಎಂಬವರು ಚೆಕ್ ಬೌನ್ಸ್ ಆಗಿತ್ತು.ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಆರೋಪಿ ಬಳಿಕ ಆತ ನ್ಯಾಯಾಲಯಕ್ಕೆ ಬರದೆ ತಲೆ ಮರೆಸಿಕೊಂಡಿದ್ದ. ಬೆಳ್ತಂಗಡಿ ನ್ಯಾಯಾಲಯವು ಈತನ ವಿರುದ್ದ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ಬಲೆಯಲ್ಲಿ ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶ ಪೊಲೀಸರ ಸಹಕಾರದೊಂದಿಗೆ ಆರೋಪಿ ಮನೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇದೀಗ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka