ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ: ಆರೋಪಿ ಬಂಧನ
ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸುಂದರ ಮೂಲ್ಯ ಎಂಬಾತನಾಗಿದ್ದು ಈತ ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾದ ರೀತಿಯಲ್ಲಿ ದನವನ್ನು ತುಂಬಿಕೊಂಡು ಬರುತ್ತಿದ್ದಾಗ ಬೆಳ್ತಂಗಡಿ ಪೇಟೆಯಲ್ಲಿ ಪೊಲೀಸರು ವಾಹನವನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಿಗೆಯಿಲ್ಲದೆ ದನ ಸಾಗಾಟ ಮಾಡುತ್ತಿರುವುದು ಸ್ಪಷ್ಟಗೊಂಡಿದ್ದು ಆರೋಪಿ ಸುಂದರ ಮೂಲ್ಯ ನನ್ನು ಬಂಧಿಸಿದ್ದಾರೆ.
ಸಾಗಾಟಮಾಡುತ್ತಿದ್ದ ದನವನ್ನು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 160,000 ಎಂದು ಅಂದಾಜಿಸಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka