ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ಸಿದ್ದರಾಮಯ್ಯ ಟ್ವೀಟ್ ಗೆ ಸಚಿವ ಅಂಗಾರ ತಿರುಗೇಟು
ಗಂಗೊಳ್ಳಿ: ಯಾರು ಕಮಿಷನ್ ಪಡೆದಿದ್ದಾರೆ, ಎಷ್ಟು ಪಡೆದಿದ್ದಾರೆ ಎಂಬುದನ್ನು ಸಿದ್ಧರಾಮಯ್ಯ ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಮಿಷನ್ ವ್ಯವಹಾರ ನಡೆದಿಲ್ಲವೇ? ಎಂದು ಸಚಿವ ಅಂಗಾರ ಪ್ರಶ್ನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಡಿದ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಅಂಗಾರ ಅವರು, ರಾಜಕೀಯಕ್ಕಾಗಿ ಸಿದ್ಧರಾಮಯ್ಯ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಸರಕಾರದ ಅವಧಿಯಲ್ಲಿ ಆರೋಪ ಕೇಳಿ ಬಂದಾಗ ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಸಹ ಕೈಗೊಳ್ಳಲಾಗಿದೆ. ಕಾಂಗ್ರೆಸ್ಸಿಗರು ಹತಾಶ ಭಾವನೆಯಿಂದ ಈ ರೀತಿಯ ಟೀಕೆಗಳನ್ನು ಮಾಡುತ್ತಿದ್ದು, ಸಿದ್ದರಾಮಯ್ಯ ಅವರು 40 ಪರ್ಸೆಂಟ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka