ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ದಲಿತ ಬಾಲಕನನ್ನು ಮನ ಬಂದಂತೆ ಥಳಿಸಿದ ಸವರ್ಣಿಯರು! - Mahanayaka

ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ದಲಿತ ಬಾಲಕನನ್ನು ಮನ ಬಂದಂತೆ ಥಳಿಸಿದ ಸವರ್ಣಿಯರು!

chikkaballapura
01/10/2022

ಚಿಕ್ಕಬಳ್ಳಾಪುರ: ಮಕ್ಕಳೊಂದಿಗೆ ಆಟವಾಡುತ್ತಾ, ಸವರ್ಣಿಯರ ಜಮೀನಿಗೆ ತೆರಳಿದ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ ಘಟನೆ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಪದೇನಹಳ್ಳಿಯಲ್ಲಿ ನಡೆದಿದೆ.


Provided by

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗನನ್ನು ರಕ್ಷಿಸಲು ಹೋದ ತಾಯಿಗೂ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು  ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


Provided by

ಇಷ್ಟೊಂದು ಗಂಭೀರವಾದ ಘಟನೆ ನಡೆದರೂ ಆರೋಪಿಗಳನ್ನು ಯಾವ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆಯೋ ತಿಳಿದಿಲ್ಲ, ಈ ಪ್ರದೇಶದಲ್ಲಿ ಸವರ್ಣಿಯರು ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳನ್ನು ನಡೆಸುತ್ತಿದ್ದಾರೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗುವ ಸಾಧ್ಯತೆ ಕಂಡು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ