ಗುಜರಾತ್’ನಲ್ಲಿ ಅರವಿಂದ್ ಕೇಜ್ರಿವಾಲ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು!

02/10/2022
ಗಾಂಧಿನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಕಿಡಿಗೇಡಿಗಳು ಪ್ಲಾಸ್ಟಿಕ್ ಬಾಟಲಿ ಎಸೆದ ಘಟನೆ ಗುಜರಾತ್ ನ ರಾಜ್ ಕೋಟ್ ಗರ್ಬಾದಲ್ಲಿ ನಡೆದಿದೆ.
ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ 2 ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸುತ್ತಿದ್ದ ವೇಳೆ ಯಾರೋ ಕೇಜ್ರಿವಾಲ್ ಮೇಲೆ ಪ್ಲಾಸ್ಟಿಕ್ ಬಾಟಲಿ ಎಸೆದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಅದೃಷ್ಟವಶಾತ್ ಬಾಟಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ತಾಗಿಲ್ಲ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka