ಬಿಜೆಪಿಯ ಅಧಿಕಾರದ ಕುರ್ಚಿಗೆ ಪರೇಶ್ ಮೇಸ್ತನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಅವರು ತಿರುಗೇಟು ನೀಡಿದ್ದಾರೆ.
ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇದರ ಬೆನ್ನಲ್ಲೇ ಪರೇಶ್ ಮೇಸ್ತನ ಹತ್ಯೆಗೆ ಕೋಮು ಬಣ್ಣ ಹಚ್ಚಿದ್ದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2017ರ ಡಿಸೆಂಬರ್ 6ರಂದು ಈ ಘಟನೆ ನಡೆದಿತ್ತು. ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ನಾಪತ್ತೆಯಾಗಿದ್ದು, ಬಳಿಕ ಡಿಸೆಂಬರ್ 8ರಂದು ಹೊನ್ನಾವರದಲ್ಲಿ ಈತನ ಮೃತದೇಹ ಪತ್ತೆಯಾಗಿತ್ತು.
ಈ ಪ್ರಕರಣ ಕೋಮು ಬಣ್ಣ ಪಡೆದುಕೊಂಡ ಬಳಿಕ ಪ್ರಕರಣದಲ್ಲಿ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು. ಇದೀಗ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು, ಕೊಲೆಯಲ್ಲ ಎಂದು ಸಿಬಿಐ ಅಭಿಪ್ರಾಯಪಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka