ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್: ವ್ಯಕ್ತಿ ಸಾವು
07/10/2022
ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ನಿರ್ಕಾಜೆಯಲ್ಲಿ ನಡೆದಿದೆ.
ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಇವರು ಮೊದಲು ವಿಟ್ಲದ ಕೂಡೂರಿನಲ್ಲಿ ವಾಸವಾಗಿದ್ದು, ಪ್ರಸ್ತುತ ನಿರ್ಕಾಜೆಯಲ್ಲಿ ವಾಸವಾಗಿದ್ದರು.
ನೆರೆಮನೆಯ ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka