ರಾಜ್ಯದಲ್ಲಿ ಮದರಸಾ ನಿಷೇಧಕ್ಕೆ ಶ್ರೀರಾಮಸೇನೆ ಒತ್ತಾಯ!
ಬೆಂಗಳೂರು: ರಾಜ್ಯದಲ್ಲಿ ಮದರಸಾಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಮದರಸಾಗಳಲ್ಲಿ ದ್ವೇಷ, ಮತಾಂಧತೆ ಬಿತ್ತುವ ಕೆಲಸ ಆಗ್ತಿದೆ ಎಂದು ಆರೋಪಿಸಿದೆ.
ಸರ್ಕಾರಿ ಅನುದಾನದಲ್ಲಿ ನಡೆಯುತ್ತಿರುವ ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಶ್ರೀರಾಮಸೇನೆ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ, ಮದರಸಾ ಶಿಕ್ಷಣ ಸಂಸ್ಥೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು. ಇದೇ ವೇಳೆ ಅಪರ ಜಿಲ್ಲಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮದರಸಾಗಳಲ್ಲಿ ದ್ವೇಷ, ಮತಾಂಧತೆ ಬಿತ್ತುವ ಕೆಲಸ ಆಗ್ತಿದೆ. ಮದರಸಾ ಉಗ್ರರ ಚಟುವಟಿಕೆ ಕೇಂದ್ರಗಳಾಗಿವೆ, ಅಲ್ಲಿನ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ ಶ್ರೀರಾಮಸೇನೆ, ಉತ್ತರಪ್ರದೇಶ, ಅಸ್ಸಾಂ ಮಾದರಿಯಂತೆ ರಾಜ್ಯದಲ್ಲೂ ಮಸರಸಾಗಳಲ್ಲಿ ಸರ್ಕಾರದ ಸುಪರ್ದಿಗೊಳಪಡಿಸಬೇಕು ಎಂದು ಆಗ್ರಹಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka