ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಸಿದ್ಧತಾ ಸಭೆ
ಕುಂದಾಪುರ: ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಸಿದ್ಧತಾ ಸಭೆಯನ್ನು ಶುಕ್ರವಾರ ಕುಂದಾಪುರ ಕಾಮಿ೯ಕ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, 10 ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣೆಕರನ್ನು ಬಲವಂತವಾಗಿ ವಸೂಲಿ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದರು.
ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವಷ೯ಗಳನ್ನು ಅಕ್ರಮವಾಗಿ ಪೂರೈಸಿದೆ. ಈ ಅವಧಿಯಲ್ಲಿ ಸುರತ್ಕಲ್, ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಸುಂಕ ಸಂಗ್ರಹದ ಹೆಸರನಲ್ಲಿ ವಾಹನ ಸವಾರರಿಂದ ವಸೂಲಿ ಮಾಡಿದ ಮೊತ್ತ ಸರಿ ಸುಮಾರು 400 ಕೋಟಿ ರೂಪಾಯಿ. ಇಷ್ಟಾದರೂ ಆಳುವವರ ಹಣದ ದಾಹ ತಣಿಯುತ್ತಿಲ್ಲ ಎಂದು ಅವರು ಆರೋಪಿಸಿದರು.
ಹೋರಾಟ ಸಮಿತಿಯ ಮುಖಂಡ ಕಿಸನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿದರು. ಇಂಟಕ್ ಮುಖಂಡ ಲಕ್ಷ್ಮಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯ ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ ಕಲ್ಲಾಗರ, ಚಂದ್ರಶೇಖರ.ವಿ. ರಮೇಶ್.ವಿ.ರಾಜು ದೇವಾಡಿಗ ರವಿ.ವಿ.ಎಂ.,ದಲಿತ ಸಂಘಷ೯ ಸಮಿತಿ ಮುಖಂಡ ನಾಗರಾಜ, ಶ್ರೀನಿವಾಸ ಮಲ್ಯಾಡಿ,ಶ್ರೀನಾಥ ಕುಲಾಲ್,ಗಣೇಶ ಮೆಂಡನ್ ಬಾಲಕೃಷ್ಢ ಎಂ. ವೆಂಕಟೇಶ್ ಕೋಣಿ ಮೊದಲಾದವರು ಉಪಸ್ಥಿತರಿದ್ದರು.
ಟೋಲ್ ಗೇಟ್ ಮುತ್ತಿಗೆ ನೇರ ಕಾಯಾ೯ಚರಣೆಯ ಅಂಗವಾಗಿ ಕುಂದಾಪುರ ಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಜಾಥಾ ನಡೆಸಲು ನಿಧ೯ರಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka