ಗ್ರಾ.ಪಂ. ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರ ಮೊಟಕು ಇಲ್ಲ: ರಾಜೀವ್ ಕುಲಾಲ್
ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲವೆಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಉಡುಪಿ ಜಿಲ್ಲೆ ಪಂಚಾಯತ್ ರಾಜ್ ಪ್ರಕೋಷ್ಠ ಸಂಚಾಲಕ ರಾಜೀವ್ ಕುಲಾಲ್ ಹೇಳಿದರು.
ಚೆಕ್ ಗೆ ಸಹಿ, ಇನ್ನಿತರ ಅಧಿಕಾರವನ್ನು ಪಿಡಿಓಗೆ ಕೊಡುತ್ತಾರೆಂಬ ಆತಂಕ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರಲ್ಲಿತ್ತು. ಈ ವಿಷಯವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಜಿಲ್ಲೆಯ ಶಾಸಕರುಗಳು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮತ್ತು ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕರು, ಸಹ ಸಂಚಾಲಕರ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದರು.
ಈ ವಿಷಯದ ಕುರಿತಾಗಿ ನಿನ್ನೆ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸದೇ ಇನ್ನೂ ಹೆಚ್ಚಿನ ಬಲವನ್ನು ಈ ಸರ್ಕಾರ ನೀಡುವುದಾಗಿ ಸಚಿವರು ಸ್ಪಷ್ಟ ಪಡಿಸಿದ್ದಾರೆ ಎಂದು ರಾಜೀವ್ ಕುಲಾಲ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka