ರಾಹುಲ್ ಗಾಂಧಿ ಫೋಟೋಗೆ ಚಪ್ಪಲಿ ಎಸೆಯಲು ಕರೆ ನೀಡಿದ ಬಿಜೆಪಿ ಮುಖಂಡ!
ಮುಂಬೈ: ಸಾವರ್ಕರ್ ಬ್ರಿಟೀಷರಿಗೆ ಸಹಾಯ ಮಾಡುತ್ತಿದ್ದರು ಮತ್ತು ಅವರಿಂದ ಪಿಂಚಣಿ ಪಡೆಯುತ್ತಿದ್ದರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕ ರಾಮ್ ಕದಮ್ ರಾಹುಲ್ ಗಾಂಧಿ ಭಾವ ಚಿತ್ರಕ್ಕೆ ಚಪ್ಪಲಿ ಎಸೆಯುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾರಗಾರನೊಬ್ಬನನ್ನು ಅವಮಾನಿಸಿದ್ದಾರೆ. ಪದೇ ಪದೇ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, ಗಾಂಧಿ, ನೆಹರೂ ದೇಶಕ್ಕಾಗಿ ಹೋರಾಡಿದರು. ಆದರೆ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು. ಬ್ರಿಟೀಷರಿಗೆ ಸಹಾಯ ಮಾಡಿದ್ದಕ್ಕಾಗಿ ಸಾವರ್ಕರ್ ಗೆ ಸ್ಟೈಫಂಡ್ ಸಿಕ್ಕಿತು ಎಂದು ಹೇಳಿಕೆ ನೀಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka