ಕೊಲೆ ಪ್ರಯತ್ನದ ಸುಳ್ಳು ಕಥೆ ಸೃಷ್ಟಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ ಕಾಂಗ್ರೆಸ್ ದೂರು - Mahanayaka
3:12 PM Thursday 12 - December 2024

ಕೊಲೆ ಪ್ರಯತ್ನದ ಸುಳ್ಳು ಕಥೆ ಸೃಷ್ಟಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ ಕಾಂಗ್ರೆಸ್ ದೂರು

yuva congress belthangady
15/10/2022

ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಹಾಗೂ ಮುಖಂಡರುಗಳು  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಕ್ಟೋಬರ್ 13 ರಂದು ರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ತಲವಾರು ಧಾಳಿ ನಡೆಸಿ ಕೊಲೆಗೆ ಪ್ರಯತ್ನಿಸಲಾಗಿದೆ. ಜಿಹಾದಿಗಳು ಕೊಲೆ ಮಾಡುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಪೋಲಿಸ್ ದೂರು ನೀಡಲಾಗಿತ್ತು.

ದೂರಿನ ಆಧಾರದಲ್ಲಿ ತನಿಖೆ ನಡೆಸಿದಾಗ ಇಡೀ ಘಟನೆ ಸುಳ್ಳು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಆದರೆ ಶಾಸಕ ಹರೀಶ್ ಪೂಂಜಾ ವಾಹನ ಓವರ್ ಟೇಕ್ ಮಾಡಿರುವುದನ್ನು ತಿರುಚಿ ಇದೊಂದು ಜಿಹಾದ್ ಕೃತ್ಯ , ನಾನು ಹಿಂದುತ್ವಕ್ಕಾಗಿ ದುಡಿಯುತ್ತಿರುವ ಕಾರಣ ನನ್ನ ಕೊಲೆ ಪ್ರಯತ್ನ ಮಾಡಲಾಗಿದೆ ಎಂದು ಸುಳ್ಳು ಕಥೆ ಸೃಷ್ಟಿಸಿ ಕೋಮು ಸೂಕ್ಷ್ಮ ವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜದಲ್ಲಿ ಗೊಂದಲ , ಅಶಾಂತಿ ಹಬ್ಬಿಸುವ ಕಾರ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ  ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಭಿನಂದನ್ ಹರೀಶ್ ಕುಮಾರ್ , ಅಶ್ವಥ್ ರಾಜ್ ಕಲ್ಲಾಜೆ , ಅಭಿದೇವ್ ಅರಿಗ ಧರ್ಮಸ್ಥಳ , ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು , ಯುವ ಮುಖಂಡರಾದ ಸುಧೀರ್ ದೇವಾಡಿಗ ಬೆಳ್ತಂಗಡಿ , ಗಣೇಶ್ ಕಣಿಯೂರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ