ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ
ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಸಂಸದ ನವೀನ್ ಕುಮಾರ್ ಕಟೀಲ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ. ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜೊತೆ ಮಾತನಾಡಿದ್ದೇನೆ. ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ನಾನು ಹೋರಾಟಗಾರರ ಜೊತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವ್ರು ಕೇಳಿದ್ದಾರೆ. ಅದಕ್ಕೆ ಅವಕಾಶ ಕೊಡೋಣ. ತದನಂತರ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡೋಣ ಎಂದು ವಿನಂತಿ ಮಾಡಿದ್ರು.
ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ ಅಂತಾ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka