ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ ಪ್ರಕರಣ ಸಿಐಡಿಗೆ ಹಸ್ತಾಂತರ!
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ನೀಡಿದೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಶಾಸಕರ ಕಾರಿನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು ಎಂದು ಶಾಸಕರ ಕಾರಿನ ಚಾಲಕನ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಫಳ್ನೀರು ನಿವಾಸಿ ರಿಯಾಜ್ (38)ಎಂಬಾತನನ್ನು ಬಂಧಿಸಲಾಗಿತ್ತು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟನೆ ನೀಡಿ ಇದು ತಲವಾರು ದಾಳಿ ಪ್ರಕರಣವಲ್ಲ ಓವರ್ಟೇಕ್ ಸಂಬಂಧ ನಡೆದ ಘಟನೆ ಎಂದು ವಿವರಿಸಿದ್ದರು ಬಂಧಿತ ರಿಯಾಜ್ ಅವರಿಗೆ ಜಾಮೀನು ಲಭಿಸಿತ್ತು.
ಘಟನೆಯ ಬಗ್ಗೆ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಸೇರಿದಂತೆ ಸೇರಿದಂತೆ ಹಲವು ಸಂಘಟನೆಗಳು ತನಿಖೆಗೆ ಒತ್ತಾಯಿಸಿದ್ದವು. ಇದರ ನಡುವೆಯೇ ಶಾಸಕರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿ ಮಾರ್ಪಟ್ಟಿತ್ತು ಇದೀಗ ರಾಜ್ಯ ಸರಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶ ನೀಡಿದ್ದು ಇಂದಿನಿಂದಲೇ ತನಿಖೆ ಆರಂಭಗೊಳ್ಳಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka