ಮಲ್ಲಿಕಾರ್ಜುನ ಖರ್ಗೆ ಒಲಿದ ಎಐಸಿಸಿ ಅಧ್ಯಕ್ಷ ಸ್ಥಾನ: 24 ವರ್ಷಗಳ ನಂತರ ಕಾಂಗ್ರೆಸ್ ಗೆ ಗಾಂಧಿಯೇತರ ಅಧ್ಯಕ್ಷ - Mahanayaka
10:15 AM Thursday 12 - December 2024

ಮಲ್ಲಿಕಾರ್ಜುನ ಖರ್ಗೆ ಒಲಿದ ಎಐಸಿಸಿ ಅಧ್ಯಕ್ಷ ಸ್ಥಾನ: 24 ವರ್ಷಗಳ ನಂತರ ಕಾಂಗ್ರೆಸ್ ಗೆ ಗಾಂಧಿಯೇತರ ಅಧ್ಯಕ್ಷ

kharge
19/10/2022

ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 1,072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ.

ಈ ಮೂಲಕ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕೂರಲಿದ್ದು, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಪರಾಜಿತ ಅಭ್ಯರ್ಥಿ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿಕೆಯಲ್ಲಿ ಶಶಿ ತರೂರ್ ಹೇಳಿದ್ದಾರೆ.

ಶುಭ ಹಾರೈಸಿದ  ಸಿದ್ದರಾಮಯ್ಯ:

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಕಠಿನ ಪರಿಶ್ರಮ, ಕಾರ್ಯಕರ್ತರ ಪ್ರೀತಿ ಮತ್ತು ಪಕ್ಷದ ಹಿರಿಯರ ಬೆಂಬಲದ ಬಲದಿಂದ ಎತ್ತರದ ಸ್ಥಾನಕ್ಕೆ ಏರಿದ ಖರ್ಗೆಯವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣೆಯ ಮೂಲಕವೇ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರ್ಧಾರ ಕೈಗೊಳ್ಳುವ ಮೂಲಕ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ‌ ರಾಹುಲ್ ಗಾಂಧಿಯವರಿಗೂ ಅಭಿನಂದನೆ ತಿಳಿಸಿದರು.

ಕಷ್ಟಕಾಲದಲ್ಲಿ ನಾಯಕತ್ವದ ವಹಿಸಿ‌ ಪಕ್ಷವನ್ನು ಯಶಸ್ವಿಯಾಗಿ‌ ಮುನ್ನಡೆಸಿದ ಸೋನಿಯಾ ಗಾಂಧಿಯವರಿಗೆ ಕಾಂಗ್ರೆಸ್ ಕುಟುಂಬದ ಸರ್ವ ಸದಸ್ಯರ ಪರವಾಗಿ ಧನ್ಯವಾದಗಳು

ಪ್ರತಿಭೆ ಮತ್ತು ಅನುಭವವನ್ನು‌ ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ. ನಮ್ಮೆಲ್ಲರ ಸಹಕಾರವೂ ಇದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಆಯ್ಕೆಯಾದ ಮಲ್ಲಿಕಾರ್ಜುನ‌ ಖರ್ಗೆಯವರು ಕನ್ನಡಿಗರು ಎನ್ನುವುದು ನಮ್ಮೆಲ್ಲರ‌‌ ಸಂತಸವನ್ನು ಇಮ್ಮಡಿಗೊಳಿಸಿದೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ