ಎರಡು ಕಾರುಗಳು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಸರಣಿ ಅಪಘಾತ! - Mahanayaka
2:20 AM Wednesday 11 - December 2024

ಎರಡು ಕಾರುಗಳು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಸರಣಿ ಅಪಘಾತ!

accident
21/10/2022

ಬಂಟ್ವಾಳ: ಎರಡು ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ನಡೆದಿದೆ.

ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಎಂಬವರು ಗಂಭೀರವಾಗಿ ಗಾಯಗೊಂಡವರಾಗಿದ್ದು, ಉಳಿದವರ ವಿವರಗಳು ಲಭ್ಯವಾಗಿಲ್ಲ.

ಮೊದಲು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಈ ವೇಳೆ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಕಾರುಗಳಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮ ಕಾರುಗಳು ನಜ್ಜುಗುಜ್ಜಾಗಿದ್ದು,  ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಹರಸಾಹಸ ಪಡುವಂತಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ