ಭೀಕರ ಅಪಘಾತದಲ್ಲಿ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಮೃತಪಟ್ಟಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ಸೊಂದರ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka