ಪ್ರಾಂಶುಪಾಲ ಕೊಠಡಿಗೆ ನುಗ್ಗಿ ಸಿಸಿಟಿವಿ ಡಿವಿಆರ್ ಕಳವು!
ಬ್ರಹ್ಮಾವರ: ತಾಲೂಕಿನ ಹನೇಹಳ್ಳಿ ಗ್ರಾಮದ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೊಠಡಿಯ ಸಿಸಿಟಿವಿ ಡಿವಿಆರ್ ಕಳವು ಮಾಡಿರುವ ಘಟನೆ ಅ.20ರಂದು ಬೆಳಿಗ್ಗೆ 8:30ಕ್ಕೆ ಕಂಡುಬಂದಿದೆ.
ಈ ಬಗ್ಗೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಕುಮಾರ್ ಬಿ.ಎಸ್. ಅವರು ದೂರು ದಾಖಲಿಸಿದ್ದಾರೆ. ಅ.19ರ ಸಂಜೆ 5:30 ಗಂಟೆಯಿಂದ ಅ.20ರ ಬೆಳಿಗ್ಗೆ 08:30 ಗಂಟೆಯ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಕಾಲೇಜಿನ ಪ್ರಾಂಶುಪಾಲರ ಕೊಠಡಿ ಹಾಗೂ ಕಛೇರಿಯ ಬಾಗಿಲಿಗೆ ಹಾಕಿದ ಬೀಗವನ್ನು ಒಡೆದು ಒಳನುಗ್ಗಿ, ಕಛೇರಿಯಲ್ಲಿನ 2 ಕಪಾಟುಗಳ ಬೀಗ ಮುರಿದು ಹುಡುಕಾಡಿದ್ದು, 3 ಮೇಜು ಡ್ರಾವರುಗಳ ಬೀಗಗಳನ್ನು ಮುರಿದು ಚೆಲ್ಲಾಪಿಲ್ಲಿ ಮಾಡಿರುತ್ತಾರೆ. ಪ್ರಾಂಶುಪಾಲರ ಮೇಜಿನ 2 ಡ್ರಾವರುಗಳನ್ನು ತೆರೆದು ಡ್ರಾವರನ್ನು ಹುಡುಕಾಡಿರುವುದು ಕಂಡು ಬಂದಿದೆ.
ಅಲ್ಲದೇ ಪ್ರಾಂಶುಪಾಲರ ಕೊಠಡಿಯಲ್ಲಿನ ಸಿ.ಸಿ.ಟಿ.ವಿ.ಯ ಡಿವಿಆರ್ ನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳುವಾದ ಡಿವಿಆರ್ ನ ಮೌಲ್ಯ ರೂಪಾಯಿ 7000 ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka