ಪತ್ನಿಯನ್ನು ಹೆದರಿಸಲು ವಿಷ ಕುಡಿದ: ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು 3 ಜೀವಗಳು
ಬೆಳಗಾವಿ: ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಹೊಳೆಪ್ಪ ಮಾರುತಿ ಮಸ್ತಿ (25), ಈತನ ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತ ದುರ್ದೈವಿ.
ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದನು. ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದನು. ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ.
ಪತಿಯ ಸಾವಿನಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇವರಿಗೆ ಮೂರು ವರ್ಷದ ಮತ್ತೊಬ್ಬಳು ಪುತ್ರಿ ಇದ್ದು, ಆಟವಾಡಲು ಹೊರಗೆ ಹೋಗಿದ್ದರಿಂದ ಬದುಕುಳಿದಿದ್ದಾಳೆ. ಘಟನೆ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka