ಮತ್ತೋರ್ವ ಸ್ವಾಮೀಜಿ ಆತ್ಮಹತ್ಯೆಗೆ ಶರಣು: ಭಕ್ತರಿಗೆ ಆಘಾತ!
ಬೆಂಗಳೂರು: ಬಂಡೇಮಠದ ಬಸವಲಿಂಗ ಸ್ವಾಮೀಜಿ(56) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಸ್ವಾಮೀಜಿಯ ಆತ್ಮಹತ್ಯೆ ಹಲವು ಅನುಮಾನ ಹುಟ್ಟಿಸಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠದ ಸ್ವಾಮೀಜಿ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವಂತಹ ಯಾವುದೇ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ವರದಿಗಳ ಪ್ರಕಾರ ಸ್ವಾಮೀಜಿಯು ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ತಿಂಗಳ ಹಿಂದೆಯಷ್ಟೇ ಕಡಲೆ ಮಠದ ಸ್ವಾಮೀಜಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದರು, ಆತ್ಮಹತ್ಯೆಗೆ ಶರಣಾಗುವಂತಹ ಕಷ್ಟ ಸ್ವಾಮೀಜಿಗಳಿಗೆ ಏನಿದೆ ಎನ್ನುವ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka