“ಕಾಂತಾರ” ಚಿತ್ರವನ್ನು ರಾಜಕೀಯಕ್ಕೆ ಬಳಸುವವರಿಗೆ ಕಿಶೋರ್ ಕುಮಾರ್ ಖಡಕ್ ಉತ್ತರ! - Mahanayaka

“ಕಾಂತಾರ” ಚಿತ್ರವನ್ನು ರಾಜಕೀಯಕ್ಕೆ ಬಳಸುವವರಿಗೆ ಕಿಶೋರ್ ಕುಮಾರ್ ಖಡಕ್ ಉತ್ತರ!

kishor
24/10/2022

ಕಾಂತಾರ ಮತ್ತು ಧರ್ಮ ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?? ಎಂದು ಕಾಂತಾರ ಚಿತ್ರದಲ್ಲಿ ಫಾರೆಸ್ಟ್ ಆಫೀಸರ್ ಆಗಿ ನಟಿಸಿದ ಖ್ಯಾತನಟ ಕಿಶೋರ್ ಅವರು ಪ್ರಶ್ನಿಸಿದ್ದಾರೆ.

ಕಾಂತಾರ ಚಿತ್ರದ ವಿಚಾರದಲ್ಲಿ ದೈವಾರಾಧನೆ ಹಿಂದೂ ಧರ್ಮದ ಭಾಗ ಅಲ್ಲ ಎಂಬ ನಟ ಚೇತನ್ ಹೇಳಿಕೆಯ ಬಳಿಕ ತೀವ್ರ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಕಿಶೋರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು ಎಂದಿದ್ದಾರೆ.

ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ, ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಕಿಶೋರ್ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ