ಬಿಜೆಪಿಯೂ ಹಲಾಲ್ ಕಮಿಷನ್ ಪಡೆಯುತ್ತಿದೆ: ಅಸಾದುದ್ದೀನ್ ಓವೈಸಿ
ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದೆ. ಹಾಗಾಗಿ ಅವರು ಪದೇ ಪದೇ ಪಾಕಿಸ್ತಾನದ ಹೆಸರು ಹೇಳುತ್ತಿರುತ್ತಾರೆ ಎಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ.
ವಿಜಯಪುರ ನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳ ಪರ ಮಂಗಳವಾರ ಪ್ರಚಾರ ಮಾಡುತ್ತಿದ್ದ ಅವರು, ನಾವು ನಮ್ಮ ರಾಜಕೀಯ ರ್ಯಾಲಿಗಳಲ್ಲಿ ಪಾಕಿಸ್ತಾನದ ಹೆಸರನ್ನು ತೆಗೆದುಕೊಳ್ಳುವುದಿಲ್ಲ. ಯತ್ನಾಳ್ ತಮ್ಮ ಭಾಷಣಗಳಲ್ಲಿ ಪಾಕಿಸ್ತಾನದ ಬಗ್ಗೆ ಪ್ರಸ್ತಾಪಿಸುತ್ತಲೇ ಇರುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ ಇದೆ ಎಂದರು.
ಪಾಕಿಸ್ತಾನದ ಮೇಲೆ ಯತ್ನಾಳ್ಗೆ ಯಾಕೆ ಪ್ರೀತಿ ಇದೆ ನನಗೆ ಗೊತ್ತಿಲ್ಲ. ಪಾಕಿಸ್ತಾನ ಹೆಸರು ಪದೇ ಪದೇ ಹೇಳು ಎಂದು ಪ್ರಧಾನಿ ಮೋದಿ ಯತ್ನಾಳ್ಗೆ ಹೇಳಿಕೊಟ್ಟಿರಬಹುದು ಎಂದು ಲೇವಡಿ ಮಾಡಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಮಿಷನ್ ಸಂಸ್ಕೃತಿ” ಅನ್ನು ಕೊನೆಗೊಳಿಸಬೇಕು ಎಂದು ಕರೆ ನೀಡಿದರಲ್ಲದೇ, ಬಿಜೆಪಿ ನಾಯಕರು ಹಲಾಲ್ ಮಾಂಸದ ಬಗ್ಗೆ ಕೆಟ್ಟ ಅಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಬಿಜೆಪಿಯೂ ಹಲಾಲ್ ಕಮಿಷನ್ ಪಡೆಯುತ್ತಿದೆ. ಅವರ ನಾಯಕರು ಹಲಾಲ್ ಕಮಿಷನ್ ಸ್ವೀಕರಿಸಿದ್ದಾರೆ ಎಂಬುದಕ್ಕೆ ನನ್ನ ಬಳಿ ಸಾಕಷ್ಟು ವಿಡಿಯೋ ಸಾಕ್ಷಿಗಳಿವೆ ಎಂದು ಹೊಸ ಬಾಂಬ್ ಸಿಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka