ಸರ್ಕಾರಿ ಆಸ್ಪತ್ರೆ ಆವರಣದಲ್ಲೇ ಮಹಿಳಾ ಸಿಬ್ಬಂದಿಗಳಿಂದ ಎಣ್ಣೆ ಪಾರ್ಟಿ: ವಿಡಿಯೋ ವೈರಲ್
ಹೈದರಾಬಾದ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ.
ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕುಳಿತುಕೊಂಡು ಮಹಿಳೆಯರು ಮದ್ಯ ಸೇವನೆ ಮಾಡುತ್ತಿರುವ ದೃಶ್ಯವನ್ನು ರೋಗಿಯೊಬ್ಬರ ಸಂಬಂಧಿಕರು ಮೊಬೈಲ್ ಮೂಲಕ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.
ಈ ಮಹಿಳಾ ಸಿಬ್ಬಂದಿ ವಿರುದ್ಧ ಈಗಾಗಲೇ ಹಲವಾರು ದೂರುಗಳಿವೆ ಎನ್ನಲಾಗಿದೆ. ಈ ನಡುವೆ 12 ಗಂಟೆಯಾಗಿದೆ ಎಂಬ ಪ್ರಜ್ಞೆ ಕೂಡ ಇಲ್ಲದೇ ಆಸ್ಪತ್ರೆ ಆವರಣದಲ್ಲಿಯೇ ಬರ್ತ್ಡೇ ಮಾಡಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂಬ ಆಕ್ರೋಶ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka