ದೀಪಾವಳಿ ಉಡುಗೊರೆಯಾಗಿ ಪತ್ರಕರ್ತರಿಗೆ ಲಂಚ ವಿಚಾರ: ಸಿಎಂ ಜನತೆಗೆ ಉತ್ತರಿಸಬೇಕು: ಕಾಂಗ್ರೆಸ್ ಒತ್ತಾಯ
ಬೆಂಗಳೂರು: ಸಿಎಂ ಕಚೇರಿಯಿಂದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಪಾಯಿ ನಗದು ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸರ್ಕಾರವನ್ನು ರಾಜ್ಯ ಕಾಂಗ್ರೆಸ್ ತರಾಟೆಗೆತ್ತಿಕೊಂಡಿದೆ.
ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು 40 ಪರ್ಸೆಂಟ್ ಕಮಿಷನ್‌ನಲ್ಲಿ ನೀಡಿದ ಹಣವೇ?, 40 ಪರ್ಸೆಂಟ್ ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಪ್ರಶ್ನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು. ದೀಪಾವಳಿಯ ಸಂದರ್ಭದಲ್ಲಿ ರಾಜ್ಯದ ಪ್ರಮುಖ ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಲಾಗಿದೆ. ಆದರೆ ಕೆಲ ಪತ್ರಕರ್ತರು ಸ್ವೀಟ್ ಬಾಕ್ಸ್ ಜೊತೆ ನೋಟಿನ ಕಂತೆ ನೋಡಿದ ತಕ್ಷಣ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka