ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ 1 ವರ್ಷ: ರಾಜ್ಯಾದ್ಯಂತ ಅಪ್ಪು ನಮನ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಲಕ್ಷಾಂತರ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬಳಿಗೆ ಆಗಮಿಸಿ ನಮನ ಸಲ್ಲಿಸುತ್ತಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಸ್ಟುಡಿಯೋದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಬ್ಯಾರಿಕೇಡ್ ಅಳವಡಿಸಿ ಯಾವುದೇ ನೂಕುನುಗ್ಗಲಿನಿಂದ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದರು.
ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲು ಆಗಮಿಸುವ ಅಭಿಮಾನಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲೇ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ.
ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಅಪ್ಪು ನಮನ ಕಾರ್ಯಕ್ರಮಗಳು ನಡೆಯುತ್ತಿದೆ. ಒಂದೆಡೆ ಗಂಧದ ಗುಡಿ ಚಿತ್ರ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಇನ್ನೊಂದೆಡೆಯಲ್ಲಿ ಅಪ್ಪು ನಿಧನರಾಗಿದ್ದಾರೆ ಎಂಬ ಅರಗಿಸಿಕೊಳ್ಳಲು ಸಾಧ್ಯವಾಗದ ಸತ್ಯದೊಂದಿಗೆ ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka