ರಸ್ತೆ ಗುಂಡಿಗೆ ಬೆಂಗಳೂರಿನಲ್ಲಿ ಮತ್ತೊಂದು ಜೀವ ಬಲಿ!
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ರಕ್ತದಾಹ ಇನ್ನೂ ಆರಿಲ್ಲ. ಕಾರೊಂದು ಗುಂಡಿ ತಪ್ಪಿಸಲು ಹೋಗಿ ಬೈಕ್ ಗೆ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಗುಂಡಿ ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಮುಂದೆ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ
ಇತ್ತೀಚೆಗಷ್ಟೆ ರಾಜಾಜಿನಗರದ ಸುಜಾತ ಥಿಯೇಟರ್ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ತಾಯಿ-ಮಗಳು ರಸ್ತೆಗುಂಡಿ ತಪ್ಪಿಸಲು ಹೋಗಿ ಬಿದ್ದು ತಾಯಿಯ ಮೇಲೆ ಕೆಎಸ್ ಆರ್ ಟಿಸಿ ಬಸ್ಸು ಹರಿದು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಇದೀಗ ಮತ್ತೊಂದು ಜೀವ ಬಲಿಯಾಗಿದೆ.
ಹಾಳಾದ, ಹೊಂಡಬಿದ್ದ ರಸ್ತೆಗುಂಡಿಗಳನ್ನು ಮುಚ್ಚಲು ನವೆಂಬರ್ 15ರ ಗಡುವು ನೀಡಲಾಗಿದ್ದರೂ ಬೆಂಗಳೂರಿನ ರಸ್ತೆ ಗುಂಡಿಗೆ ಮುಕ್ತಿ ಸಿಕ್ಕಿಲ್ಲ. ಇನ್ನೆಷ್ಟು ಜೀವಗಳ ಬಲಿಯಾಗಬೇಕು ಅನ್ನೋ ಪ್ರಶ್ನೆಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka