ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದವ್ರು ವಶಕ್ಕೆ ಪಡೆದುಕೊಂಡು
ಪುತ್ತೂರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿ ಮುಂಬೈಯ ಸಹರ್ ಪೊಲೀಸ್ ಠಾಣೆಯಿಂದ ವಾರಂಟ್ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಲಾಗಿದೆ. ಕೋರ್ಟ್ ಗೆ ಆರೋಪಿಯನ್ನು ಹಾಜರುಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka