ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಆ್ಯಂಬುಲೆನ್ಸ್: 2 ಕಿ.ಮೀ.ಗಳವರೆಗೆ ಟ್ರಾಫಿಕ್ ಜಾಮ್ - Mahanayaka

ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಆ್ಯಂಬುಲೆನ್ಸ್: 2 ಕಿ.ಮೀ.ಗಳವರೆಗೆ ಟ್ರಾಫಿಕ್ ಜಾಮ್

trafic jam
01/11/2022

ಕೊಟ್ಟಿಗೆಹಾರ: ಆ್ಯಂಬುಲೆನ್ಸ್  ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಮೂಡಿಗೆರೆ ಹೊರವಲಯದ ರೈತ ಭವನ ಬಳಿ ಮದುವೆ ಹಿನ್ನೆಲೆ ರಸ್ತೆಯ ಪಕ್ಕ ಅಡ್ಡಾದಿಡ್ಡಿ ಪಾರ್ಕಿಂಗ್ ನಡೆಸಿರುವುದರಿಂದಾಗಿ ಸುಮಾರು ಸುಮಾರು 2 ಕಿಲೋಮೀಟರ್ ದೂರ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದೇ ಸಂದರ್ಭದಲ್ಲಿ ಬಂದ ಆ್ಯಂಬುಲೆನ್ಸ್ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದು, ಮುಂದೆ ಸಂಚರಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು.

ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಉದ್ದುದ್ದ ಸಾಲುಗಳಲ್ಲಿ ವಾಹನಗಳು ನಿಂತಿದ್ದರೂ, ಟ್ರಾಫಿಕ್ ಜಾಮ್ ಸರಿಪಡಿಸುವವರು ಯಾರೂ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ