ಬಹುಭಾಷಾ ನಟಿ ರಂಭಾ ಕಾರು ಭೀಕರ ಅಪಘಾತ: ರಂಭಾ ಪುತ್ರಿ ಸಶಾ ಸ್ಥಿತಿ ಗಂಭೀರ
ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಅವರ ಮಗಳ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿವಾಹದ ಬಳಿಕ ನಟಿ ರಂಭಾ ಅವರು ವಿದೇಶ (ಕೆನಡಾ)ದಲ್ಲಿ ವಾಸವಿದ್ದಾರೆ. ವಿದೇಶದಲ್ಲೇ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಂಭಾ ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಪುತ್ರಿಗೆ ಗಂಭೀರವಾಗಿ ಗಾಯವಾಗಿದೆ.
ಮಕ್ಕಳನ್ನು ಶಾಲೆಯಿಂದ ಕರೆತರುತ್ತಿದ್ದಾಗ ತಮ್ಮ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ತಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಆದರೆ ಮಗಳು ಸಶಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಂಭಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka