ಪೊಲೀಸರು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ: ಕೆ.ವಸಂತ ಬಂಗೇರ ಆರೋಪ - Mahanayaka
4:24 PM Wednesday 11 - December 2024

ಪೊಲೀಸರು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ: ಕೆ.ವಸಂತ ಬಂಗೇರ ಆರೋಪ

congress
03/11/2022

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ ಶಾಸಕರ ಅಣತಿಯಂತೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರಿಗೆ ನ್ಯಾಯವೇ ಸಿಗುತ್ತಿಲ್ಲ. ಕಲ್ಮಂಜ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಎಚ್ಚರಿಸಿದ್ದಾರೆ.

ಬುಧವಾರ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಕಲ್ಮಂಜ ಗ್ರಮದ ಕರಿಯನೆಲದಲ್ಲಿ ಕಾಡುಪ್ರಾಣಿ ಹಿಡಿಯಲೆಂದು ತಂತಿಯ ಮೂಲಕ ವಿದ್ಯುತ್ ಹರಿಸಿ ವ್ಯಕ್ತಿಯ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದ ದಿನೇಶ್ ಕೊಲೆಪ್ರಕರಣ, ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ಶಾಸಕರ ಒತ್ತಡದಿಂದಾಗಿ ಪೊಲೀಸರ ಸಹಕಾರದೊಂದಿಗೆ ಮುಚ್ವಿ ಹಾಕಲಾಗಿದೆ ಎಂದು ಆರೋಪಿಸಿದ ಅವರು ಕಲ್ಮಂಜದ ಉದಯ ಗೌಡ ಅವರನ್ನು ಉದ್ದೇಶ ಪೂರ್ವಕವಾಗಿ ಕೊಲೆ ಮಾಡಲಾಗಿದೆ. ಕೃಷಿಯೇ ಮಾಡದ ಗದ್ದೆಯಲ್ಲಿ ಯಾವ ಕಾರಣಕ್ಕಾಗಿ ತಂತಿ ಮೂಲಕ ವಿದ್ಯುತ್ ಹರಿಸಿದ್ದಾರೆ ಎಂಬುದು ಸ್ಪಷ್ಟವಾಗಬೇಕಾಗಿದೆ. ಆರೋಪಿಗಳು ತಾವು ಇದನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದರೂ ಪೊಲೀಸರು ಅವರನ್ನು ಬಂಧಿಸದೆ ಬಂದಿದ್ದಾರೆ, ಕೊಲೆಯಾದ ವ್ಯಕ್ತಿಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ ಇಂತಹ ಘಟನೆಗಳಿಂದ ಪೊಲೀಸ್ ವ್ಯವಸ್ಥೆಯ ಮೇಲೆ ಜನರು ವಿಶ್ವಾಸ ಕಳೆದು ಕೊಳ್ಳುವಂತಾಗಿದೆ. ಇಲಾಖೆಯ ಘನತೆಯನ್ನು ಉಳಿಸುವುದಕ್ಕಾದರೂ ಕಾನೂನನ್ನು ಪಾಲಿಸಿ, ಆರೋಪಿಗಳ ವಿರುದ್ದ ಸರಿಯಾದ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿ ನೊಂದವರಿಗೆ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ತಾಲೂಕು ಉಸ್ತುವಾರಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ಶಾಹಿದ್ ತೆಕ್ಕಲ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ.ಗೌಡ, ಶೈಲೇಶ್ ಕುಮಾರ್, ಮುಖಂಡರುಗಳಾದ ಕೇಶವ ಗೌಡ,ಅಬ್ದುಲ್ ರಹಿಮಾನ್ ಪಡ್ಪು, ಅಭಿದನ್, ಗ್ರೇಸಿಯನ್ ವೇಗಸ್, ದಯಾನಂದ ಬೆಳಾಲು, ನಮಿತ, ಮೋಹನ್ ಗೌಡ ಕಲ್ಮಂಜ, ಟಿ.ವಿ ದೇವಸ್ಯ, ರೋಯಿ ಪುದುವೆಟ್ಟು, ಭರತ್ ಬಂಗಾಡಿ, ಅಭಿದೇವ್ ಅರಿಗ, ಸೆಬಾಸ್ಟಿಯನ್ ಕಳೆಂಜ ಹಾಗೂ ಇತರರು ಇದ್ದರು.

ಪ್ರತಿಭಟನಾ ಕಾರರೊಂದಿಗೆ ಮಾತುಕತೆ ನಡೆಸಿದ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸುವುದಾಗಿ ಹಾಗೂ ಆರೋಪಿಗಳನ್ನು ಎರಡು ದಿನಗಳಲ್ಲಿ ಬಂಧಿಸುವುದಾಗಿ ತಿಳಿಸಿದರು ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: 

shorturl.at/dimz0

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ:

shorturl.at/demQ6

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: shorturl.at/swJKM

ಇತ್ತೀಚಿನ ಸುದ್ದಿ