ಗಂಗಾಮತ ಮತ್ತು ಗೊಂಡ ಕುರುಬರನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಶಾಸಕ ಪ್ರಿಯಾಂಕ್ ಖರ್ಗೆ ಮನವಿ
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಾದ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಗಂಗಾಮತ (ಕಬ್ಬಲಿಗ) ಮತ್ತು ಗೊಂಡ ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಬಗ್ಗೆ 2019-20ರಲ್ಲಿ ಕಾಂಗ್ರೆಸ್ ಸರ್ಕಾರ ಕಳುಹಿಸಿದ್ದ ಶಿಫಾರಸ್ಸನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದರು.
“ಗಂಗಾಮತ” ಸಮುದಾಯ ಮತ್ತು ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಗೊಂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಅದರ ವರದಿ ಸಮೇತ STಗೆ ಸೇರಿಸುವಂತೆ ಶಿಘಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು.
ಈ ಎರಡೂ ಸಮುದಾಯಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸಮಾಜದಲ್ಲಿ ಮೇಲ್ದರ್ಜೆಗೇರುವ ಅವಕಾಶಗಳಿಗಾಗಿ ಹೋರಾಟ ನಡೆಸುತ್ತಾ ಬಂದಿವೆ ಎಂದು ಸಚಿವರಿಗೆ ಮನದಟ್ಟು ಮಾಡಿರುವುದಾಗಿ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದರ ಕುರಿತು ಆದಷ್ಟು ಶೀಘ್ರದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವರು ಇಂದು ಭರವಸೆ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka