ಬೈಕ್ –ಬಸ್ ನಡುವೆ ಭೀಕರ ಅಪಘಾತ: ಬಸ್ಸಿನಡಿಗೆ ಸಿಲುಕಿದ ಬೈಕ್
ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ.
ಗಾಯಗೊಂಡ ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್‍ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ.
ಬೈಕ್ ಸವಾರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಮೊಳಹಳ್ಳಿ: ಹೋಟೆಲ್ ಕಾರ್ಮಿಕ ಆತ್ಮಹತ್ಯೆ
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಮರದ ಕೊಂಬೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೊಳಹಳ್ಳಿ ಗ್ರಾಮದ ರಾಜಾಜಿ ಭಂಡಾಕರ್ಸ್ ಅವರ ಹಾಡಿಯಲ್ಲಿ ನ.3ರಂದು 10:15ಕ್ಕೆ ಬೆಳಕಿಗೆ ಬಂದಿದೆ.
ಮೃತರನ್ನು ಮೊಳಹಳ್ಳಿ ನಿವಾಸಿ ಪ್ರವೀಣ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಇವರು ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಸರಿಯಾಗಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇರುತ್ತಿದ್ದರು.
ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಳಿಯ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka