ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್ ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಸಹಿತ ಮೂವರು ಎನ್ ಐಎ ವಶಕ್ಕೆ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಪಿಎಫ್ ಐ, ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ ಎಂಬವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka